BSF ನೇಮಕಾತಿ 2025: ಕಾನ್ಸ್‌ಟೇಬಲ್ ಹುದ್ದೆಗಳಿಗೆ ದೊಡ್ಡ ಅವಕಾಶ – ತಕ್ಷಣ ಅರ್ಜಿ ಸಲ್ಲಿಸಿ!

By ಸುಖೇಶ್ ಶಾನಭಾಗ್ Updated: Tuesday, August 12, 2025, 4:32 [IST]

BSF Recruitment 2025 in Kannada

ಬಿಎಸ್‌ಎಫ್ (ಬಾರ್ಡರ್ ಸೆಕ್ಯೂರಿಟಿ ಫೋರ್ಸ್) ಉದ್ಯೋಗ ನೇಮಕಾತಿ  2025: ಗಡಿ ಭದ್ರತಾ ಪಡೆಯಲ್ಲಿ ಕಾನ್ಸ್‌ಟೇಬಲ್ ಆಗಿ ಸೇರಲು ಅತ್ಯತ್ತಮವಾದ ಅವಕಾಶ

ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯ ಅಡಿಯಲ್ಲಿ 3588 ಹುದ್ದೆಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 23 ಎಂದು ತಿಳಿಸಲಾಗಿದೆ. ಈ ಉದ್ಯಾಗ ಪಡೆಯಲು 10 ನೇ ತರಗತಿ ತೇರ್ಗಡೆಯಾಗಿರಬೇಕು ಮತ್ತು 2 ವರ್ಷಗಳ ಐಟಿಐ ಅರ್ಹತೆ ಹೊಂದಿರಬೇಕು. ವಯಸ್ಸು 18-25 ಎಂದು ನಿಗದಿಪಡಿಸಲಾಗಿದೆ. ನೀವು ಅರ್ಜಿ ಸಲ್ಲಿಸಲು ಶುಲ್ಕ ರೂ. ೧೦೦ ಪಾವತಿಸಬೇಕಾಗುತ್ತದೆ. ಅರ್ಜಿ ಶುಲ್ಕದಲ್ಲಿ ಮೀಸಲಾತಿ ವರ್ಗಗಳಿಗೆ ವಿನಾಯಿತಿ ನೀಡಲಾಗಿದೆ. 

ಆಯ್ಕೆ ಪ್ರಕ್ರಿಯೆ ಹೀಗಿದೆ: 

ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿದೆ. ನಿಮಗೆ ಈ ಉದ್ಯೋಗದಲ್ಲಿ ಆಸಕ್ತಿ ಇದ್ದರೆ, ಅಂತಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ.

ಗಡಿ ಭದ್ರತಾ ಪಡೆ ಅಂದರೆ ಬಿಎಸ್‌ಎಫ್ (ಬಾರ್ಡರ್ ಸೆಕ್ಯೂರಿಟಿ ಫೋರ್ಸ್) ಕಾನ್ಸ್‌ಟೇಬಲ್ ಹುದ್ದೆಗಳ ಹಲವಾರು ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಹತಾ ಮಾನದಂಡಗಳನ್ನು ಪೂರೈಸಿರಬೇಕು. ಅರ್ಹತೆ ಇರುವ ಅಭ್ಯರ್ಥಿಗಳು ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಅಧಿಕೃತ ನೇಮಕಾತಿ ಪೋರ್ಟಲ್ rectt.bsf.gov.in ಗೆ ಭೇಟಿ ನೀಡಿ, ತಮ್ಮ ಅರ್ಜಿಗಳನ್ನು ಆನ್‌ಲೈನ್‌ ಮುಖಾಂತರವಾಗಿ ಸಲ್ಲಿಸಬಹುದು.

ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 23 ಎಂದು ನಿಗದಿ ಮಾಡಲಾಗಿದೆ. 

ಇದರ ಜೊತೆಗೆ, ಅರ್ಜಿಯಲ್ಲಿ ತಿದ್ದುಪಡಿಗಳನ್ನು ಮಾಡುವ ವಿಂಡೋ ಆಗಸ್ಟ್ 24 ರಂದು ಆರಂಭವಾಗಲಿದ್ದು ಆಗಸ್ಟ್ 26 ರಂದು ಮುಕ್ತಾಯಗೊಳ್ಳಲಿದೆ. ಬಿಎಸ್ಎಫ್ ತನ್ನ ಖಾಲಿ ಇರುವ ಹಾಗೂ ಹೊಸದಾಗಿ ಭಾರ್ತಿ ಮಾಡಲಿರುವ ಹುದ್ದೆಗಳಿಗಾಗಿ ನೇಮಕಾತಿ ಅಭಿಯಾನ ಪ್ರಾರಂಭಿಸಿದೆ. ಈ ಅಭಿಯಾನದ ಪ್ರಕ್ರಿಯೆಯ ಭಾಗವಾಗಿ 3,588 ಕಾನ್ಸ್ಟೇಬಲ್‌ಗಳನ್ನು ನೇಮಿಸಿಕೊಳ್ಳಲು ಬಿಎಸ್ಎಫ್ ಸಜ್ಜಾಗಿದೆ.

ಬಿಎಸ್ಎಫ್ ಕಾನ್ಸ್ಟೇಬಲ್ ಹುದ್ದೆಗೆ ನೇಮಕಾತಿ ನಡೆಸಲು ಅರ್ಹತಾ ಮಾನದಂಡಗಳು:

ಶೈಕ್ಷಣಿಕ ಅರ್ಹತೆ:

ನಿಮಗೆ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಆಸಕ್ತಿ ಇದ್ದರೆ ನೀವು 10 ನೇ ತರಗತಿ ಪಾಸಾಗಿರಬೇಕು. ಇದರ ಜೊತೆಗೆ, ಅವರು ಸಂಬಂಧಿತ ವಿಭಾಗದಲ್ಲಿ ಎರಡು ವರ್ಷಗಳ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು.

ವಯೋಮಿತಿ:

ಆನ್‌ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು ಅರ್ಹ ಅಭ್ಯರ್ಥಿಗಳ ಪ್ರಕಾರ ವಯಸ್ಸು 18 ರಿಂದ 25 ವರ್ಷಗಳ ನಡುವೆ ಇರಬೇಕು. ಆದರೆ, ನೀವು ಮೀಸಲು ವರ್ಗಕ್ಕೆ ಸೇರಿದ ಅಭ್ಯರ್ಥಿಗಳಾಗಿದ್ದರೆ ಗರಿಷ್ಠ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ, ಆರ್ಥಿಕವಾಗಿ ದುರ್ಬಲ ವರ್ಗ ಮತ್ತು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. ೧೦೦ ಆಗಿದೆ. ಈ ಅರ್ಜಿ ಶುಲ್ಕವನ್ನು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಂದರೆ ಡೆಬಿಟ್ ಕಾರ್ಡ್/ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್ ಮೂಲಕ ಮಾಡಬಹುದು. ಇದರ ಜೊತೆಗೆ, ನಿಮ್ಮ ಸಮೀಪದ ನೋಂದಾಯಿತ ಸಾಮಾನ್ಯ ಸೇವಾ ಕೇಂದ್ರದ ಮೂಲಕವೂ ಸಹ ಪಾವತಿ ಮಾಡಬಹುದು. 

ಮಹಿಳಾ ಅಭ್ಯರ್ಥಿಗಳು ಮತ್ತು ಎಸ್‌ಸಿ, ಎಸ್‌ಟಿ, ಬಿಎಸ್‌ಎಫ್ ಸಿಬ್ಬಂದಿ ಮತ್ತು ಮಾಜಿ ಸೈನಿಕರಿಗೆ ಅರ್ಜಿ ಶುಲ್ಕ ಪಾವತಿ ಮಾಡುವುದರಿಂದ ವಿನಾಯಿತಿ ಕೊಡಲಾಗಿದೆ.

ಬಿಎಸ್‌ಎಫ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆಯ ಪ್ರಕಾರ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ನಂತರ ದಾಖಲೆ ಪರಿಶೀಲನೆಯನ್ನು ನಡೆಸಲಾಗುತ್ತದೆ. ಇದರ ನಂತರ ದೈಹಿಕ ಸದೃಢತಾ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಎಲ್ಲಾ ಪರೀಕ್ಷೆಗಳ ಹಂತಗಳಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ನಂತರ ವೈದ್ಯಕೀಯ ಪರೀಕ್ಷೆಗೆ ಒಳಗಾಗಿ, ತಮ್ಮನ್ನು ತಾವು ದೈಹಿಕವಾಗಿ ಆರೋಗ್ಯಕರ ವ್ಯಕ್ತಿ ಎಂದು ಸಾಭೀತು ಮಾಡಬೇಕಾಗಿರುತ್ತದೆ.  ಈ ಪರೀಕ್ಷೆಯನ್ನು ಅಧಿಕಾರಿಗಳ ವೈದ್ಯಕೀಯ ಮಂಡಳಿಯು ಅಭ್ಯರ್ಥಿಗಳ ದೈಹಿಕ ಸದೃಢತೆ ಮತ್ತು ವೈದ್ಯಕೀಯ ಸದೃಢತೆಯನ್ನು ನಿರ್ಣಯಿಸಲು ನಡೆಸುತ್ತದೆ. ಈ ಎಲ್ಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ನೀವು ಹುದ್ದೆಗೆ ಆಯ್ಕೆಯಾದರೆ, 7 ನೇ ವೇತನ ಆಯೋಗದ ರಚನೆಯ ಪ್ರಕಾರ ನಿಮಗೆ ತಿಂಗಳಿಗೆ ₹21,700 ರಿಂದ ₹69,100 ರವರೆಗೆ ಸಂಬಳ ಸಿಗಲಿದೆ.

ಇಲ್ಲಿ ಅರ್ಜಿ ಸಲ್ಲಿಸಿ: https://rectt.bsf.gov.in/#bsf-current-openings

ಅಧಿಕೃತ ವೆಬ್‌ಸೈಟ್: ಬಿಎಸ್‌ಎಫ್ ಅಧಿಕೃತ ವೆಬ್‌ಸೈಟ್

ಮತ್ತೇಕೆ ತಡ! ಇಂದೇ ಅರ್ಜಿ ಸಲ್ಲಿಸಿ.

ಹಕ್ಕುತ್ಯಾಗ: ಈ ಲೇಖನದಲ್ಲಿನ ಮಾಹಿತಿಯು ಜ್ಞಾನದ ಉದ್ದೇಶಗಳಿಗಾಗಿ ಮಾತ್ರ ನೀಡಲಾಗಿದೆ. ಅರ್ಜಿದಾರರು ತಾವು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಬಿಎಸ್‌ಎಫ್ ವೆಬ್‌ಸೈಟ್ ಮೂಲಕ ಎಲ್ಲಾ ವಿವರಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.

By ಸುಖೇಶ್ ಶಾನಭಾಗ್ Updated: Tuesday, August 12, 2025, 4:32 [IST]


Scroll to Top